Home ಟಾಪ್ ಸುದ್ದಿಗಳು ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

ಅಪಹರಣ ಪ್ರಕರಣ: ಭವಾನಿ ರೇವಣ್ಣ ಕಾರು ಚಾಲಕ ಅರೆಸ್ಟ್

ಬೆಂಗಳೂರು: ಮೈಸೂರು ಜಿಲ್ಲೆ ಕೆಆರ್ ನಗರ ಮಹಿಳೆಯ ಅಪಹರಣ ಆರೋಪ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾದ ಬೆನ್ನಲ್ಲೇ ಅವರ ಕಾರು ಚಾಲಕ ಅಜಿತ್ ನನ್ನೂ ಎಸ್ ಐಟಿ ಬಂಧಿಸಿರುವ ವಿಚಾರ ಬೆಳಕಿಗೆ ಬಂದಿದೆ.


ಬುಧವಾರ ರಾತ್ರಿಯೇ ಚಿಕ್ಕಮಗಳೂರಿನಲ್ಲಿ ಅಜಿತ್ ನನ್ನು ಎಸ್ ಐಟಿ ಬಂಧಿಸಿತ್ತು. ಚಾಲಕ ಅಜಿತ್ ಚಿಕ್ಕಮಗಳೂರಿನ ಸಂಬಂಧಿಕರ ಮನೆಯಲ್ಲಿ ಇದ್ದ. ಈ ಮಾಹಿತಿ ಆಧರಿಸಿ ಚಿಕ್ಕಮಗಳೂರಿನಲ್ಲಿ ಎಸ್ ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಈ ಹಿಂದೆ ಅಜಿತ್ ಮಾವನ ಮನೆಯಲ್ಲಿ ಕೂಡ ಶೋಧ ನಡೆಸಿದ್ದರು. ಸಂತ್ರಸ್ತೆಯ ವಿಡಿಯೋ ರೆಕಾರ್ಡ್ ಮಾಡಿ ವೈರಲ್ ಮಾಡಿರುವ ಆರೋಪ ಅಜಿತ್ ಮೇಲಿದೆ.

Join Whatsapp
Exit mobile version