ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

Prasthutha|

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಕೆಆರ್ ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಇದು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದೆ.

ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರ (ಮೇ 03) ರಂದು ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೆಚ್ ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ.

Join Whatsapp