ಭೀಮಾ ಕೋರೆಗಾಂವ್ ಪ್ರಕರಣ: ಮಹೇಶ್ ರಾವತ್ ಗೆ ಜಾಮೀನು ನಿರಾಕರಿಸಿದ NIA ನ್ಯಾಯಾಲಯ

Prasthutha|

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಕಾಯ್ದೆಯಡಿಯಲ್ಲಿ ಬಂಧಿತರಾದ ಅರಣ್ಯ ಹಕ್ಕು ಸಂರಕ್ಷಣಾ ಹೋರಾಟಗಾರ ಮಹೇಶ್ ರಾವತ್ ಅವರ ಜಾಮೀನು ಅರ್ಜಿಯನ್ನು ವಿಶೇಷ NIA ನ್ಯಾಯಾಲಯ ತಳ್ಳಿ ಹಾಕಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

- Advertisement -

ರಾವತ್ ನಿಷೇಧಿತ ಸಂಘಟನೆಗಳಿಗೆ ಆರ್ಥಿಕ ನೆರವನ್ನು ಒದಗಿಸಿದ್ದಾರೆ ಮತ್ತು ನಕ್ಸಲ್ ಚಳುವಳಿಯಲ್ಲಿ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಎಂಬ ಆರೋಪದಲ್ಲಿ ಮಹೇಶ್ ಅವರನ್ನು ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿತ್ತು.

ಈ ನಡುವೆ ಪಬ್ಲಿಕ್ ಪ್ರಾಸಿಕ್ಯೂಷನ್ ಗೆ ಮಹೇಶ್ ಅವರ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಒದಗಿಸಲು ಸಾಧ್ಯವಾಗಿಲ್ಲ ಎಂದು ಆರೋಪಿ ಪರ ವಕೀಲರಾದ ವಿಜಯ್ ಹಿರೇಮಠ ನ್ಯಾಯಾಲಯಕ್ಕೆ ತಿಳಿಸಿದರು.

- Advertisement -

2018 ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಮಹೇಶ್ ರಾವತ್ ಅತ್ಯಂತ ಕಿರಿಯ ರಾಜಕೀಯ ಕೈದಿಯಾಗಿದ್ದಾರೆ.



Join Whatsapp