ಭೀಮಾ ಕೋರೆಗಾಂವ್ ಪ್ರಕರಣ: ಗೊನ್ಸಲ್ವೆಸ್, ಫೆರಾರೆಗೆ ಸುಪ್ರೀಂ ಜಾಮೀನು

Prasthutha|

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಬಂಧನದಲ್ಲಿದ್ದ ಇಬ್ಬರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

- Advertisement -


ವರ್ನಾನ್ ಗೊನ್ಸಲ್ವೆಸ್ ಹಾಗೂ ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.


ನ್ಯಾಯಮೂರ್ತಿಗಳಾದ ಅನುರಾಧ ಬೋಸ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.

- Advertisement -


ಇವರಿಬ್ಬರು ಮಹಾರಾಷ್ಟ್ರ ತೊರೆಯಕೂಡದು ಹಾಗೂ ಪಾಸ್ಪೋರ್ಟ್ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಸೂಚನೆ ನೀಡಿದೆ.


ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

Join Whatsapp