Home ಟಾಪ್ ಸುದ್ದಿಗಳು ಭೀಮಾ ಕೋರೆಗಾಂವ್ ಪ್ರಕರಣ: ಗೊನ್ಸಲ್ವೆಸ್, ಫೆರಾರೆಗೆ ಸುಪ್ರೀಂ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣ: ಗೊನ್ಸಲ್ವೆಸ್, ಫೆರಾರೆಗೆ ಸುಪ್ರೀಂ ಜಾಮೀನು

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 5 ವರ್ಷಗಳಿಂದ ಬಂಧನದಲ್ಲಿದ್ದ ಇಬ್ಬರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.


ವರ್ನಾನ್ ಗೊನ್ಸಲ್ವೆಸ್ ಹಾಗೂ ಅರುಣ್ ಫೆರಾರೆ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.


ನ್ಯಾಯಮೂರ್ತಿಗಳಾದ ಅನುರಾಧ ಬೋಸ್ ಹಾಗೂ ಸುಧಾಂಶು ಧುಲಿಯಾ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.


ಇವರಿಬ್ಬರು ಮಹಾರಾಷ್ಟ್ರ ತೊರೆಯಕೂಡದು ಹಾಗೂ ಪಾಸ್ಪೋರ್ಟ್ಗಳನ್ನು ಪೊಲೀಸರಿಗೆ ಒಪ್ಪಿಸಬೇಕು ಎಂದು ಸೂಚನೆ ನೀಡಿದೆ.


ಈ ಪ್ರಕರಣವು ಪುಣೆಯಲ್ಲಿ ಡಿಸೆಂಬರ್ 31, 2017 ರಂದು ನಡೆದ ಎಲ್ಗರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದೆ, ಅಲ್ಲಿ ಮಾಡಿದ ಉದ್ರೇಕಕಾರಿ ಭಾಷಣಗಳು ಮರುದಿನ ಪುಣೆಯ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು ಎಂದು ಪೊಲೀಸರು ಆರೋಪಿಸಿದ್ದಾರೆ.

Join Whatsapp
Exit mobile version