Home ಟಾಪ್ ಸುದ್ದಿಗಳು ಭೋಜ್‌ಪುರಿ ಖ್ಯಾತ ನಟಿ ಅಮೃತಾ ಪಾಂಡೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆ

ಭೋಜ್‌ಪುರಿ ಖ್ಯಾತ ನಟಿ ಅಮೃತಾ ಪಾಂಡೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆ

ಬಾಘಲಪುರ: ಭೋಜ್‌ಪುರಿ ಖ್ಯಾತ ನಟಿ ಅಮೃತಾ ಪಾಂಡೆ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮುಂಬೈನಲ್ಲಿ ನೆಲೆಸಿರುವ ಅಮೃತಾ ಪಾಂಡೆ ಮದುವೆ ಕಾರ್ಯಕ್ರಮ ನಿಮಿತ್ತ ಬಿಹಾರದ ಭಾಘಲಪುರಕ್ಕೆ ಆಗಮಿಸಿದ್ದರು. 4 ದಿನಗಳ ಮದುವೆ ಕಾರ್ಯಕ್ರಮ ಮುಗಿಸಿ ಮುಂಬೈಗೆ ಮರಳಬೇಕಿದ್ದ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ.

ಅಪಾರ್ಟ್‌ಮೆಂಟ್‌ನಲ್ಲಿದ್ದ ಅಮೃತಾ ಪಾಂಡೆ ಸೀಲಿಂಗ್ ಫ್ಯಾನ್‌ಗೆ ಸೀರೆ ಕಟ್ಟಿ ತಮ್ಮ ಬದುಕು ಅಂತ್ಯಗೊಳಿಸಿದ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಅಮೃತಾ ಕೋಣೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಭೋಜ್‌ಪುರಿಯಲ್ಲಿ ಬಹು ಬೇಡಿಕೆ ನಟಿ ಎಂದೇ ಗುರುತಿಸಿಕೊಂಡಿದ್ದ ಅಮೃತಾ ಪಾಂಡೆ ಹಲವು ಚಿತ್ರಗಳಲ್ಲಿ ನಟಿಸಿ ಭಾರಿ ಮೆಚ್ಚುಗೆಗಳಿಸಿದ್ದರು. ಮುಂಬೈನಲ್ಲಿ ನೆಲೆಸಿರುವ ಅಮೃತಾ ಪಾಂಡೆ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ಬಿಹಾರದ ಭಾಘಲಪುರಕ್ಕೆ ಆಗಮಿಸಿದ್ದರು. ಆದರೆ ಕಾರ್ಯಕ್ರಮದ ನಡುವೆ ಅಪಾರ್ಟ್‌ಮೆಂಟ್‌ಗೆ ತೆರಳಿದ ಅಮೃತಾ ಪಾಂಡೆ ಬದುಕು ಅಂತ್ಯಗೊಳಿಸಿದ್ದಾರೆ.


ಕುಟುಂಬಸ್ಥರು, ಆಪ್ತರ ಪ್ರಕಾರ, ಅಮೃತಾ ಪಾಂಡೆ ಖಿನ್ನತೆ ಒಳಗಾಗಿದ್ದರು. ಖಿನ್ನತೆಯಿಂದ ಬಳಲಿದ್ದ ಅಮೃತಾ ಪಾಂಡೆ ಚಿಕಿತ್ಸೆಯನ್ನೂ ಪಡೆದುಕೊಳ್ಳುತ್ತಿದ್ದರು.

ನಿರಂತರ ವೈದ್ಯರ ಸಂಪರ್ಕದಲ್ಲಿದ್ದ ಅಮೃತಾ ಪಾಂಡೆ ಇದೀಗ ದಿಢೀರ್ ಶವವಾಗಿ ಪತ್ತೆಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬದುಕು ಅಂತ್ಯಗೊಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯಲಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

Join Whatsapp
Exit mobile version