Home ಕರಾವಳಿ ಭೂತ ಕೋಲವು ಹಿಂದೂ ಸಂಸ್ಕೃತಿಗೆ ಸೇರಲ್ಲ: ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಗೆ ದೂರು

ಭೂತ ಕೋಲವು ಹಿಂದೂ ಸಂಸ್ಕೃತಿಗೆ ಸೇರಲ್ಲ: ನಟ ಚೇತನ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಗೆ ದೂರು

ಕಾರ್ಕಳ: ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆಯವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ನಟ ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ದಕ್ಕೆ ಉಂಟಾಗಿದೆ. ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.


ಹಿಂದಿ ಹೇರಿಕೆ ಹೇಗೆ ಒಪ್ಪೋಕಾಗಲ್ವೋ ಹಾಗೆಯೇ ಹಿಂದುತ್ವ ಹೇರಿಕೆ ಒಪ್ಪಲಾಗಲ್ಲ. ಧರ್ಮ, ಜಾತಿಗಳಲ್ಲಿ ವಿವಿಧತೆ ಇದೆ. ಹಿಂದೂ ಬೇರೆ ಹಿಂದುತ್ವ ಬೇರೆ. ಭೂತಕೋಲ ಮೂಲ ನಿವಾಸಿಗಳ ಆಚರಣೆ. ಕೇವಲ ಹಿಂದು ಧರ್ಮದ್ದಲ್ಲ ಎಂದು ಹೇಳುವ ಮೂಲಕ ಚೇತನ್ ನಮ್ಮ ಧರ್ಮದ ನಂಬಿಕೆಗೆ ದಕ್ಕೆ ಉಂಟು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹ ವ್ಯಕ್ತಪಡಿಸಿದೆ.

Join Whatsapp
Exit mobile version