ಬೆಳಗಾವಿ: ಕರ್ತವ್ಯ ವೇಳೆ ಕಂಠಪೂರ್ತಿ ಕುಡಿದು ತಾಲೂಕು ತಹಶೀಲ್ದಾರ್ ಕಚೇರಿಯ ಮುಂದೆ ಗ್ರಾಮ ಲೆಕ್ಕಾಧಿಕಾರಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.
ತಹಶೀಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್ ಆಗಿದ್ದು ಕಂಠಪೂರ್ತಿ ಕುಡಿದು ಮಲಗಿರುವ ಗ್ರಾಮ ಲೆಕ್ಕಾಧಿಕಾರಿ ಸಂಜು ಬೆಣ್ಣಿ ಎಂದು ಗುರುತಿಸಲಾಗಿದೆ. ಮೊದಲು ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಆಗಿದ್ದ ಸಂಜು ಬೆಣ್ಣಿ ಅಲ್ಲಿಯೂ ಕರ್ತವ್ಯ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅವರನ್ನು ಸವದತ್ತಿ ತಹಶೀಲ್ದಾರ್ ಕಚೇರಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು ತಹಶೀಲ್ದಾರ್ ಕಚೇರಿಯಲ್ಲಿಯೂ ತನ್ನ ಚಾಳಿ ಬಿಡದೆ ಮುಂದುವರೆಸಿದ್ದಾರೆ.
ಇಷ್ಟಾದರೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಏನೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.