Home ರಾಷ್ಟ್ರೀಯ ಭೋಪಾಲ್ | ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅವ್ಯವಹಾರ: ಸ್ವಪಕ್ಷದ ಶಾಸಕನಿಂದಲೇ ಆರೋಪ

ಭೋಪಾಲ್ | ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಅವ್ಯವಹಾರ: ಸ್ವಪಕ್ಷದ ಶಾಸಕನಿಂದಲೇ ಆರೋಪ

ಭೋಪಾಲ್: ರಾಜ್ಯದಲ್ಲಿ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ವ್ಯಾಪಕ ಅವ್ಯವಹಾರ ನಡೆಯುತ್ತಿದೆ ಎಂದು ಸ್ವಪಕ್ಷದ ಶಾಸಕ ಅಜಯ್ ಬಿಷ್ಣೋಯಿ ಗಂಭೀರ ಆರೋಪ ಮಾಡಿದ್ದಾರೆ.


ಎಕ್ಸ್ ಪೋಸ್ಟ್ ನಲ್ಲಿ ತಮ್ಮ ಸ್ವಂತ ಅನುಭವವನ್ನು ಹಂಚಿಕೊಂಡಿರುವ ಅವರು, “ನನ್ನ ಪರವಾಗಿ ಗುತ್ತಿಗೆ ಆಧಾರದಲ್ಲಿ ಬಿಜೆಪಿ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಭರವಸೆ ನೀಡುವ ಒಂದು ಏಜೆನ್ಸಿಯಿಂದ ನನಗೆ ದೂರವಾಣಿ ಕರೆ ಬಂದಿದೆ” ಎಂದು ಹೇಳಿದ್ದಾರೆ. ಪಕ್ಷದ ಸದಸ್ಯತ್ವ ಸಂಖ್ಯೆ ಹೆಚ್ಚಿಸಿಕೊಳ್ಳುವ ಸಲುವಾಗಿ ಇಂಥ ಸೇವೆಗಳನ್ನು ಬಳಸಿಕೊಳ್ಳುತ್ತಿರುವ ಪ್ರವೃತ್ತಿ ಹೆಚ್ಚುತ್ತಿರುವುದು ಸರಿಯಲ್ಲ ಎಂದು ಅವರು ವಿಶ್ಲೇಷಿಸಿದ್ದಾರೆ.


ಇಂಥದ್ದೇ ಹಲವು ಏಜೆನ್ಸಿಗಳು ಇರಬಹುದು. ಸಂಘಟನೆಯನ್ನು ನಾಶಪಡಿಸುವ ಮೂಲಕ ಹೆಚ್ಚಿನ ಸಂಖ್ಕೆ ತೋರಿಸಿ ಸ್ವಯಂಘೋಷಿತ ನಾಯಕರು ತಮ್ಮ ಶ್ರೇಣಿಯನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಲು ಇದು ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ.

Join Whatsapp
Exit mobile version