April 28, 2021

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧ ಪ್ರಸ್ತಾಪಕ್ಕೆ ಶ್ರೀಲಂಕಾ ಸಂಸತ್ತು ಅನುಮೋದನೆ

ಕೊಲಂಬೊ: ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಇದೆ ಎಂಬ ಕಾರಣ ನೀಡಿರುವ ಶ್ರೀಲಂಕಾದ ಸಚಿವ ಸಂಪುಟವು ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ನಿಷೇಧ ಪ್ರಸ್ತಾವಕ್ಕೆ ಅನುಮೋದನೆ ನೀಡಿದೆ. ಇದಕ್ಕೆ ಭಾರಿ ಪರ- ವಿರೋಧಗಳು ವ್ಯಕ್ತವಾಗಿದ್ದು, ವಿವಾದವನ್ನೂ ಸೃಷ್ಟಿಸಿದೆ. ಆದರೆ ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಇಂಥದ್ದೊಂದು ಕ್ರಮ ಅನಿವಾರ್ಯ ಎಂದು ಇಲ್ಲಿಯ ಸರ್ಕಾರ ಹೇಳಿದೆ.

ಕಳೆದ ಮಾರ್ಚ್‌ನಲ್ಲಿ ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದ ಸಾರ್ವಜನಿಕ ಭದ್ರತಾ ಸಚಿವ ಶರತ್ ವೀರಶೇಖರ, ಬುರ್ಖಾಗಳನ್ನು ನಿಷೇಧಿಸಲು ಸಂಪುಟದ ಅನುಮೋದನೆಯನ್ನು ಕೋರಿದ್ದರು. ನಂತರ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅದರ ನಡುವೆಯೂ ಇದೀಗ ಶ್ರೀಲಂಕಾ ಸಚಿವ ಸಂಪುಟ ಬುರ್ಖಾ ನಿಷೇಧಕ್ಕೆ ಅನುಮೋದನೆ ನೀಡಿದೆ.

 “ಈಸ್ಟರ್ ಭಾನುವಾರದಂದು ಹೋಟೆಲ್ ಗಳು ಮತ್ತು ಚರ್ಚುಗಳ ಮೇಲೆ ಸಂಘಟಿತ ಭಯೋತ್ಪಾದಕ ದಾಳಿಗಳ ಅಲೆಯ ಎರಡು ವರ್ಷಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ”  ಎಂದು ಸಂಪುಟ ವಕ್ತಾರ ಮತ್ತು ವಾರ್ತಾ ಸಚಿವ ಕೆಹಲೀಯಾ ರಂಬೂಕ್ವೆಲ್ಲ ಹೇಳಿದ್ದಾರೆ.

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!