Home ಟಾಪ್ ಸುದ್ದಿಗಳು ಬೈಬಲ್ ಬೋಧನೆ: ಶಾಲೆಯಲ್ಲಿ ಧಾರ್ಮಿಕ ಬೋಧನೆಗೆ ಅವಕಾಶವಿಲ್ಲ ಎಂದು ನೋಟಿಸ್ ಜಾರಿಗೊಳಿಸಿದ ರಾಜ್ಯ ಸರಕಾರ

ಬೈಬಲ್ ಬೋಧನೆ: ಶಾಲೆಯಲ್ಲಿ ಧಾರ್ಮಿಕ ಬೋಧನೆಗೆ ಅವಕಾಶವಿಲ್ಲ ಎಂದು ನೋಟಿಸ್ ಜಾರಿಗೊಳಿಸಿದ ರಾಜ್ಯ ಸರಕಾರ

ಬೆಂಗಳೂರು: ಪಠ್ಯಕ್ರಮದ ಭಾಗವಾಗಿ ಬೈಬಲ್ ಬೋಧನೆ ಮಾಡಿದ್ದಕ್ಕಾಗಿ ಬೆಂಗಳೂರಿನ ಕ್ಲಾರೆನ್ಸ್ ಶಾಲೆಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಯ ವರ್ತನೆಯಿಂದ ಕರ್ನಾಟಕ ಶಿಕ್ಷಣ ಕಾಯ್ದೆಯ ಉಲ್ಲಂಘನೆಯಾಗಿದೆ. ಶಾಲೆಗಳಲ್ಲಿ ಧಾರ್ಮಿಕ ವಿಚಾರ ಬೋಧನೆ ಮಾಡುವಂತಿಲ್ಲ. ಹೀಗಾಗಿ ಶಾಲೆಯ ವಿರುದ್ಧ ನೊಟೀಸ್ ಜಾರಿ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ನೋಂದಣಿಯಾಗಿರುವ ಯಾವುದೇ ಶಿಕ್ಷಣ ಸಂಸ್ಥೆಗಳು ಕರ್ನಾಟಕ ಶಿಕ್ಷಣ ಕಾಯ್ದೆಯ ವ್ಯಾಪ್ತಿಗೆ ಬರುತ್ತವೆ ಮತ್ತು ಪಠ್ಯಕ್ರಮದ ಭಾಗವಾಗಿ ಧಾರ್ಮಿಕ ಪುಸ್ತಕವನ್ನು ಅಧ್ಯಯನ ಮಾಡಲು ವಿದ್ಯಾರ್ಥಿಗಳನ್ನು ಒತ್ತಾಯಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ಬೈಬಲ್ ಅನ್ನು ತಮ್ಮ ಪಠ್ಯಕ್ರಮದ ಭಾಗವಾಗಿಸುವ ಬಗ್ಗೆ ವೆಬ್ ಸೈಟ್ ನಲ್ಲಿ ಉಲ್ಲೇಖಿಸಿದ್ದಾರೆ, ಇದಕ್ಕಾಗಿ ನೋಟಿಸ್ ಜಾರಿ ಮಾಡಲಾಗಿದ್ದು, ನೋಟಿಸ್’ಗೆ ಉತ್ತರ ನೀಡಬೇಕಿದೆ ಎಂದಿದ್ದಾರೆ. ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಲಾ ಅಧಿಕಾರಿಗಳು, ಕಾನೂನು ಪಾಲನೆ ಮಾಡುವುದಾಗಿ ಹಾಗೂ ಸಮಸ್ಯೆ ಇತ್ಯರ್ಥಪಡಿಸಲು ವಕೀಲರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.

Join Whatsapp
Exit mobile version