Home ಟಾಪ್ ಸುದ್ದಿಗಳು ಬೀದರ್‌: ಪರಿಸರ ಪ್ರೇಮಿ ರಿಯಾಝ್ ಪಾಶಾಗೆ ಜೀವ ವೈವಿಧ್ಯ‌ ಪ್ರಶಸ್ತಿ ಪ್ರದಾನ

ಬೀದರ್‌: ಪರಿಸರ ಪ್ರೇಮಿ ರಿಯಾಝ್ ಪಾಶಾಗೆ ಜೀವ ವೈವಿಧ್ಯ‌ ಪ್ರಶಸ್ತಿ ಪ್ರದಾನ

ಬೆಂಗಳೂರು: ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ ಪರಿಸರ ದಿನಾಚರಣೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ
ಔರಾದ ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಝ್ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.

ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ರಿಯಾಝ್ ಕೆಲವು ವರ್ಷಗಳಿಂದ ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು, ವಿವಿಧ ಅವಘಡದಿಂದ ಗಾಯಗೊಂಡ ಪಕ್ಷಿ, ಪ್ರಾಣಿಗಳಿಗೆ ಚಿಕಿತ್ಸೆ ಕೊಡಿಸಿ ಪ್ರಾಣಾಪಾಯದಿಂದ ರಕ್ಷಿಸುವ ಮೂಲಕ ಜೀವ ವೈವಿಧ್ಯತೆಯ ಸಂರಕ್ಷಣೆ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಈ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಕರ್ನಾಟಕ ಜೀವವೈವಿಧ್ಯ ಮಂಡಳಿ ಕೊಡುಮಾಡುವ 2023ನೇ ಸಾಲಿನ ಜೀವ ವೈವಿಧ್ಯ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಸಮಾರಂಭದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಬ್ರೀಜೇಶ್ ಕುಮಾರ್, ಕರ್ನಾಟಕ ಜೀವವೈವಿಧ್ಯ ಮಂಡಳಿಯ ಜಗತ್ ರಾಮ್ ಸೇರಿದಂತೆ ಇಲಾಖೆ ಅಧಿಕಾರಿಗಳು ಇದ್ದರು.

Join Whatsapp
Exit mobile version