Home ಟಾಪ್ ಸುದ್ದಿಗಳು ಬೀದರ್ | ಮುಖ್ಯಮಂತ್ರಿ ಬೊಮ್ಮಾಯಿಗೆ ಕಪ್ಪುಬಾವುಟ ಪ್ರದರ್ಶನ

ಬೀದರ್ | ಮುಖ್ಯಮಂತ್ರಿ ಬೊಮ್ಮಾಯಿಗೆ ಕಪ್ಪುಬಾವುಟ ಪ್ರದರ್ಶನ

ಬೀದರ್: ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮಕ್ಕೆ ಗೈರುಹಾಜರಾದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ದಲಿತ ಪರ ಹೋರಾಟಗಾರರು ಕಪ್ಪುಬಾವುಟ ಪ್ರದರ್ಶಿಸಿ, ಗೋ ಬ್ಯಾಕ್ ಘೋಷಣೆ ಕೂಗಿದ ಘಟನೆ ಬೀದರ್’ನ ಹುಮ್ನಾಬಾದ್ ನಲ್ಲಿ ನಡೆದಿದೆ.

ಘಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪರಿಶಿಷ್ಟ ಜಾತಿಗೆ ಮೀಸಲಾತಿ ಹೆಚ್ಚಿಸಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಬೇಕಾಗಿತ್ತು. ಆದರೆ ಮುಖ್ಯಮಂತ್ರಿ ಈ ಕಾರ್ಯಕ್ರಮಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ದಲಿತ ಪರ ಹೋರಾಟಗಾರರು ಮುಖ್ಯಮಂತ್ರಿ ವಿರುದ್ಧ ಕಪ್ಪುಬಾವುಟ ಪ್ರದರ್ಶಿಸಿ, ಗೋಬ್ಯಾಕ್ ಘೋಷಣೆ ಕೂಗಿದ್ದಾರೆ.

Join Whatsapp
Exit mobile version