Home ಟಾಪ್ ಸುದ್ದಿಗಳು ಬೀದರ್: ATMಗೆ ಹಣಹಾಕಲು ಬಂದ ಸಿಬ್ಬಂದಿಗಳ ಮೇಲೆ ಖದೀಮರ ಗುಂಡಿನ ದಾಳಿ, ಇಬ್ಬರು ಸಾವು..!

ಬೀದರ್: ATMಗೆ ಹಣಹಾಕಲು ಬಂದ ಸಿಬ್ಬಂದಿಗಳ ಮೇಲೆ ಖದೀಮರ ಗುಂಡಿನ ದಾಳಿ, ಇಬ್ಬರು ಸಾವು..!

ಬೀದರ್: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ.

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಇಬ್ಬರು ಭದ್ರತಾ ಸಿಬ್ಬಂದಿಗಳು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಮೃತರನ್ನು ಗಿರಿ ವೆಂಕಟೇಶ್ ಮತ್ತು ಶಿವ ಕಾಶಿನಾಥ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು CMS ಏಜೆನ್ಸಿಯ ಸಿಬ್ಬಂದಿಯಾಗಿದ್ದರು.

ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಸ್​ಬಿಐ ಬ್ಯಾಂಕ್ ಎಟಿಎಂಗೆ ಹಣವನ್ನು ತುಂಬಿಸಲು ಭದ್ರತಾ​ ಸಿಬ್ಬಂದಿ CMS ಏಜೆನ್ಸಿಯ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಏಕಾಏಕಿ ಎಂಟು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಖರೀಮರು 93 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್​ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version