ಅಮೆರಿಕ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕೃತ ಆಯ್ಕೆ | ಕಮಲಾ ಹ್ಯಾರಿಸ್ ಉಪಾಧ್ಯಕ್ಷೆ

Prasthutha|

ವಾಷಿಂಗ್ಟನ್ : ಅಮೆರಿಕ ನೂತನ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ ಮತ್ತು ಉಪಾಧ್ಯಕ್ಷರಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ನೂತನ ಸಂಸದರ ಸಭೆಯಲ್ಲಿ ಬೈಡನ್ ಮತ್ತು ಕಮಲಾ ಅವರನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದರು.

ನ.3ರಂದು ನಡೆದಿದ್ದ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ವಿವಿಧ ರಾಜ್ಯಗಳ ಸಂಸದರು ಸೋಮವಾರ ಸಂವಿಧಾನದ ನಿಯಮಾನುಸಾರ ಮತ್ತು ಒಕ್ಕೂಟ ವ್ಯವಸ್ಥೆಯ ಕಾನೂನಿಗೆ ಅನುಗುಣವಾಗಿ ಅಧ್ಯಕ್ಷರ ಆಯ್ಕೆಗೆ ಮತ ಚಲಾಯಿಸಿದರು.

- Advertisement -

ಚುನಾವಣೆಯಲ್ಲಿ ಸೋತಿದ್ದರೂ, ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಚುನಾವಣಾ ಫಲಿತಾಂಶವನ್ನೇ ತಡೆಯಲು ಯತ್ನಿಸಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಎಲ್ಲಾ ಪ್ರಯತ್ನಗಳು ವಿಫಲಗೊಂಡಿದ್ದು, ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಈಗ ಅನಿವಾರ್ಯವಾಗಿದೆ.

ಅಮೆರಿಕದಲ್ಲಿ 50 ರಾಜ್ಯಗಳಿಂದ 538 ಎಲೆಕ್ಟ್ರೊಲ್ ಕಾಲೇಜು ಮತಗಳಿದ್ದು, ಅಧ್ಯಕ್ಷ ಸ್ಥಾನ ಪಡೆಯಲು 270 ಸ್ಥಾನಗಳನ್ನು ಗೆಲ್ಲುವುದು ಅನಿವಾರ್ಯ. ಬೈಡನ್ ಇದರಲ್ಲಿ 306 ಸ್ಥಾನಗಳನ್ನು ಗೆದ್ದಿದ್ದರು. ಟ್ರಂಟ್ 232 ಸ್ಥಾನಗಳಿಗೆ ಸೀಮಿತವಾಗಿದ್ದರು.

ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ಬೈಡನ್, ಜ.20ರಂದು ಅಮೆರಿಕದ 46ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

- Advertisement -