ಮಾಸ್ಕೋ: ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಅವರ ಪತ್ನಿ, ಮಗಳು ಸೇರಿದಂತೆ ಇತರೆ 23 ಅಮೆರಿಕನ್ನರಿಗೆ ರಷ್ಯಾ ಪ್ರವೇಶಕ್ಕೆ ನಿಷೇಧ ಹೇರಿದೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ.
- Advertisement -
ರಷ್ಯಾದ ರಾಜಕೀಯ ಮತ್ತು ಸಾರ್ವಜನಿಕ ವ್ಯಕ್ತಿಗಳ ವಿರುದ್ಧ ನಿರಂತರವಾಗಿ ಹಸ್ತಕ್ಷೇಪ ನಡೆಸುತ್ತಿರುವ ಹಿನ್ನೆಲೆಯಲ್ಲಿ 25 ಅಮೆರಿಕನ್ ನಾಗರಿಕರನ್ನು ನಿಷೇಧಿಸುವ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.