ಬೆಂಗಳೂರು: ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದ್ದು, ಪರಿಣಾಮಕಾರಿಯಾಗಿ ನಡೆಯಲು ಸಚಿವರ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಸಿದ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಐಟಿ, ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚಿಸುವಂತೆ ಸೂಚಿಸಿದ್ದಾರೆ.