ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ಮಂಗಳವಾರ ಬಿಗ್ ರಿಲೀಫ್ ನೀಡಿದೆ.
ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ED) 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ.
ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಇದೀಗ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ತನಿಖೆಯಿಂದ ನಿರಾಳರಾಗುವಂತಾಗಿದೆ.