ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್: ದೇಶದ್ರೋಹ ಪ್ರಕರಣದಿಂದ ಖುಲಾಸೆ

Prasthutha|

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ.

- Advertisement -

ಹಲವು ಪ್ರಕರಣಗಳಲ್ಲಿ ಬಂಧಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅವರ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.

ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕೀಲ ಸಲ್ಮಾನ್ ಸಫ್ದರ್, ತಮ್ಮ ನಾಯಕನ ಖುಲಾಸೆಯನ್ನು ದೃಢಪಡಿಸಿದ್ದಾರೆ.

- Advertisement -

ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ನೇತೃತ್ವದ ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳ ವರದಿ ತಿಳಿಸಿದೆ.



Join Whatsapp