ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್ ಎನ್ನುವಂತೆ ಅವರ ವಿರುದ್ಧದ ದೇಶ ದ್ರೋಹ ಪ್ರಕರಣದಲ್ಲಿ ವಿಧಿಸಲಾಗಿದ್ದ ಶಿಕ್ಷೆಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
ಹಲವು ಪ್ರಕರಣಗಳಲ್ಲಿ ಬಂಧಿಯಾಗಿ ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಅವರ ವಿರುದ್ಧದ ದೇಶದ್ರೋಹ ಪ್ರಕರಣವನ್ನು ಇಸ್ಲಾಮಾಬಾದ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿದೆ.
ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ವಕೀಲ ಸಲ್ಮಾನ್ ಸಫ್ದರ್, ತಮ್ಮ ನಾಯಕನ ಖುಲಾಸೆಯನ್ನು ದೃಢಪಡಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಅಮೀರ್ ಫಾರೂಕ್ ನೇತೃತ್ವದ ಇಸ್ಲಾಮಾಬಾದ್ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ನಿರ್ಧಾರವನ್ನು ಪ್ರಕಟಿಸಿದೆ ಎಂದು ಪಾಕಿಸ್ತಾನ ಮಾಧ್ಯಮಗಳ ವರದಿ ತಿಳಿಸಿದೆ.