ನಾಗಾರ್ಜುನಗೆ ಬಿಗ್ ರಿಲೀಫ್: ಕನ್ವೆನ್ಷನ್ ಸೆಂಟರ್ ಕಟ್ಟಡ ತೆರವಿಗೆ ಹೈಕೋರ್ಟ್‌ ತಡೆ

Prasthutha|

ಹೈದರಾಬಾದ್‌: ತೆಲುಗು ನಟ ನಾಗಾರ್ಜುನಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ.

- Advertisement -

ನಾಗಾರ್ಜುನ ಒಡೆತನದ ಎನ್ ಕನ್ವೆನ್ಷನ್ ಸೆಂಟರ್ ಕೆಡವದಂತೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಹೈದರಾಬಾದ್‌ ನ ಮದಾಪುರದಲ್ಲಿರುವ ಎನ್ ಕನ್ವೆನ್ಷನ್ ಸೆಂಟರ್ ಕೆಲ ಭಾಗಗಳನ್ನು ಇಂದು (ಆ.24) ಹೈಡ್ರಾ ಅಧಿಕಾರಿಗಳು ಧ್ವಂಸಗೊಳಿಸಿದ್ದಾರೆ. ವಿವಾದ ಕೋರ್ಟ್‌ನಲ್ಲಿದ್ರೂ ನೋಟಿಸ್ ನೀಡದೇ ತೆರವು ಮಾಡಲಾಗಿದೆ ಎಂದು ನಾಗಾರ್ಜುನ ಮತ್ತೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.



Join Whatsapp