Home ಟಾಪ್ ಸುದ್ದಿಗಳು ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಮರಳಿದ ಸಂಸದ ಸ್ಥಾನ; ಎಐಸಿಸಿ ಕಚೇರಿ ಎದುರು ಸಂಭ್ರಮ

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಮರಳಿದ ಸಂಸದ ಸ್ಥಾನ; ಎಐಸಿಸಿ ಕಚೇರಿ ಎದುರು ಸಂಭ್ರಮ

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಇದರಿಂದಾಗಿ ಲೋಕಸಭೆ ಸದಸ್ಯತ್ವದಿಂದಲೇ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ನಿರಾಳರಾಗದ್ದಾರೆ. ಹಾಗೆಯೇ, ಸಂಸತ್ ಸದಸ್ಯತ್ವ ಸ್ಥಾನವೀಗ ಮರಳಿದೆ.


ರಾಹುಲ್ ಗಾಂಧಿ ಲೋಕಸಭೆ ಸದಸ್ವತ್ವದಿಂದ ಅನರ್ಹವಾಗಲು ಕಾರಣವಾಗಿರುವ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸಮರ್ಥಿಸಲು ವಿಚಾರಣಾ ನ್ಯಾಯಾಲಯವು ಕಾರಣವನ್ನು ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಚಾರಣಾ ನ್ಯಾಯಾಲಯದ ಆದೇಶದ ಪರಿಣಾಮಗಳು ವ್ಯಾಪಕವಾಗಿವೆ. ರಾಹುಲ್ ಗಾಂಧಿ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಹಕ್ಕು ಮಾತ್ರವಲ್ಲದೆ ಅವರನ್ನು ಆಯ್ಕೆ ಮಾಡಿದ ಮತದಾರರ ಮೇಲೂ ಪರಿಣಾಮ ಬೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಬಳಿಕ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

Join Whatsapp
Exit mobile version