Home ಟಾಪ್ ಸುದ್ದಿಗಳು ರಾಮ್ ದೇವ್, ಬಾಲಕೃಷ್ಣಗೆ ಬಿಗ್ ರಿಲೀಫ್: ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

ರಾಮ್ ದೇವ್, ಬಾಲಕೃಷ್ಣಗೆ ಬಿಗ್ ರಿಲೀಫ್: ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟ ಸುಪ್ರೀಂ

ನವದೆಹಲಿ: ಗ್ರಾಹಕರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಮತ್ತು ಅದರ ಸಂಸ್ಥಾಪಕ ಬಾಬಾ ರಾಮ್ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಸುಪ್ರೀಂ ಕೋರ್ಟ್ ಕೈಬಿಟ್ಟಿದೆ.

ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠವು ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ತೀರ್ಪು ಪ್ರಕಟಿಸಿದೆ.


ಜಾಹೀರಾತು ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕೆಲವು ಜಾಹೀರಾತುಗಳನ್ನು ಪ್ರಕಟಸಿದಂತೆ ತಿಳಿಸಿದ್ದರೂ ಕೂಡಾ ಪತಂಜಲಿ ಸಂಸ್ಥೆ ಪ್ರಕಟಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸುವ ಮೂಲಕ ನ್ಯಾಯಾಂಗ ನಿಂದನೆ ಮಾಡಿತ್ತು. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು.


ಕಂಪೆನಿಯು 2023ರ ನವೆಂಬರ್ ನ ಆದೇಶವನ್ನು ಉಲ್ಲಂಘಿಸಿದೆ. ಗುಣಮುಖವಾಗದ ರೋಗಗಳನ್ನು ಗುಣಪಡಿಸುವ ಬಗ್ಗೆ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡುವ ಮೂಲಕ ಸುಪ್ರೀಂ ಕೋರ್ಟ್ ಮತ್ತು ಅದರ ಸ್ವಂತ ಜವಾಬ್ದಾರಿಯನ್ನು ಉಲ್ಲಂಘಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಲವಾರು ಸತತ ವಿಚಾರಣೆಯಲ್ಲಿ, ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ರಾಮ್ದೇವ್ ಮತ್ತು ಪತಂಜಲಿ ಆಯುರ್ವೇದದ ಕ್ಷಮೆಯನ್ನು ಸ್ವೀಕರಿಸಲು ನಿರಾಕರಿಸಿತು.

Join Whatsapp
Exit mobile version