ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಬಿಗ್ ರಿಲೀಫ್: ಬಂಧಿಸದಂತೆ ಹೈಕೋರ್ಟ್ ಆದೇಶ

Prasthutha|

ಬೆಂಗಳೂರು: ತಮ್ಮ ವಿರುದ್ಧದ ಪೊಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಗ್ ರಿಲೀಫ್ ಸಿಕ್ಕಿದೆ.

- Advertisement -


ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಅವರಿಗೆ ವಯಸ್ಸಾಗಿದ್ದು ಸಹಜವಾಗಿಯೇ ಅನಾರೋಗ್ಯ ಸಮಸ್ಯೆಗಳಿರುತ್ತವೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ.


ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಇನ್ನು ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಮಾ.28ರಂದು ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಏ.12ರಂದು ವಿಚಾರಣೆಗೆ ಹಾಜರಾಗಿದ್ದರು. 2ನೇ ನೋಟಿಸ್ ಗೆ ಅವರು ಹಾಜರಾಗಿಲ್ಲ. ಜೂ.17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ತನಿಖೆಗೊಳಪಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

Join Whatsapp
Exit mobile version