ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಪ್ರೀ ಮೆಟ್ರಿಕ್ ವಿದ್ಯಾರ್ಥಿವೇತನ ರದ್ದತಿಗೆ ಕೇಂದ್ರ ನಿರ್ಧಾರ

Prasthutha|

ನವದೆಹಲಿ: ಒಬಿಸಿ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 1 ರಿಂದ 8 ನೇ ತರಗತಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೂಲಕ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

- Advertisement -

ಇದರಿಂದಾಗಿ ಒಂದರಿಂದ ಎಂಟನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಸಿಗುತ್ತಿದ್ದ ವಿದ್ಯಾರ್ಥಿವೇತನ ಇನ್ನುಮುಂದೆ ಸ್ಥಗಿತವಾಗಲಿದೆ.

ಶಿಕ್ಷಣ ಹಕ್ಕು ಕಾಯ್ದೆ ಪ್ರತಿ ಮಗುವಿಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣವನ್ನು (1 ರಿಂದ 8 ನೇ ತರಗತಿಗಳು) ಒದಗಿಸುವುದನ್ನು ಕಡ್ಡಾಯಗೊಳಿಸುತ್ತದೆ. ಅದರಂತೆ, 9 ಮತ್ತು 10 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಕೇಂದ್ರ ಸರ್ಕಾರ ನೋಟಿಸ್ ನಲ್ಲಿ ತಿಳಿಸಿದೆ.

- Advertisement -

2022-23 ರಿಂದ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ವ್ಯಾಪ್ತಿಯು 9 ಮತ್ತು 10 ನೇ ತರಗತಿಗಳಿಗೆ ಮಾತ್ರ ಇರುತ್ತದೆ ಎಂದು ಅದು ಹೇಳಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ರಾಜ್ಯದಲ್ಲಿ ಸುಮಾರು ಎಂಟು ಲಕ್ಷ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗಲಿದ್ದಾರೆ.



Join Whatsapp