Home ಟಾಪ್ ಸುದ್ದಿಗಳು ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: 13 BJP ಸದಸ್ಯರು JDS ಸೇರ್ಪಡೆ

ಜೇವರ್ಗಿ ಪುರಸಭೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: 13 BJP ಸದಸ್ಯರು JDS ಸೇರ್ಪಡೆ

ಕಲಬುರಗಿ: ಜಿಲ್ಲೆಯ ಜೇವರ್ಗಿ ಪುರಸಭೆಯ 13 ಜನ ಬಿಜೆಪಿ ಸದಸ್ಯರು JDSಗೆ ಸೇರುವ ಮೂಲಕ ಬಿಗ್ ಶಾಕ್ ಕೊಟ್ಟಿದ್ದಾರೆ.


ರವಿವಾರ ಬೆಂಗಳೂರಿನ JDS ಕಚೇರಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ 13 ಜನ JDS ಸೇರ್ಪಡೆಯಾಗಿದ್ದಾರೆ.


ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಅವರು ಬಿಗ್ ಆಪರೇಷನ್ ಮಾಡಿ ಬಿಜೆಪಿ ಸದಸ್ಯರನ್ನ ಜೆಡಿಎಸ್ ಗೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.


17 ಬಿಜೆಪಿ ಸದಸ್ಯರಲ್ಲಿ 13 ಜನರನ್ನು ಸೆಳೆದು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಸ್ಥಳೀಯ ಬಿಜೆಪಿ ನಾಯಕರಿಗೆ ಶಾಕ್ ಕೊಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನಲೆ ದೊಡ್ಡಪ್ಪಗೌಡ ಅವರು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು.


2008ರಲ್ಲಿ ಮಾಜಿ ಸಿಎಂ ಧರಂ ಸಿಂಗ್ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದು ಬೀಗಿದ್ದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್ ಅವರಿಗೆ ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಇದರಿಂದ ಕಣ್ಣೀರು ಹಾಕಿದ್ದ ದೊಡ್ಡಪ್ಪಗೌಡ ಅವರು ಬಿಜೆಪಿ ವಿರುದ್ಧ ಕೆಂಡಕಾರಿದ್ದರು.

Join Whatsapp
Exit mobile version