ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಗುಲಾಂ ನಬಿ ಆಝಾದ್

Prasthutha|

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

- Advertisement -

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ)ಯನ್ನು ನಡೆಸುತ್ತಿರುವ ಮೈತ್ರಿಕೂಟದ ಆಶ್ರಯದಲ್ಲಿ ಕಾಂಗ್ರೆಸ್ ಇಚ್ಛಾಶಕ್ತಿ ಮತ್ತು ಸಾಮರ್ಥ್ಯವನ್ನು ಕಳೆದುಕೊಂಡಿದೆ. ಆದ್ದರಿಂದ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೊಂದಿಗಿನ ನನ್ನ ಅರ್ಧ ಶತಮಾನದ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿದ್ದೇನೆ  ಎಂದು ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ 5 ಪುಟಗಳ ರಾಜೀನಾಮೆ ಪತ್ರದಲ್ಲಿ ಆಜಾದ್ ತಿಳಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹೊಡೆತ ಉಂಟಾಗಿದೆ ಎನ್ನಲಾಗಿದೆ.

ಆಜಾದ್ ಅವರು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿ ಮತ್ತು ರಾಜಕೀಯ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.



Join Whatsapp