ಹುಬ್ಬಳ್ಳಿ: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಮರಿತಿಬ್ಬೇಗೌಡ, ಮುಂದಿನ ಅವಧಿಗೆ ನಾನು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಸಭಾಪತಿಗಳು ರಾಜೀನಾಮೆ ಅಂಗೀಕಾರ ಮಾಡಿದ್ದಾರೆ. ಸಭಾಪತಿಗೆ ಧನ್ಯವಾದಗಳು ಎಂದರು. ಅಲ್ಲದೆ, ಹೆಚ್ ಡಿ ದೇವೇಗೌಡ , ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ ಅವರು ಪಕ್ಷಕ್ಕೂ ಗುಡ್ಬೈ ಹೇಳಿದ್ದಾರೆ.