ವಾಹನ ಸವಾರರಿಗೆ ಬಿಗ್ ಶಾಕ್: ಪೆಟ್ರೋಲ್, ಡೀಸೆಲ್ ದರ ಏರಿಕೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ.

- Advertisement -

ಪೆಟ್ರೋಲ್ ಮತ್ತು ಡೀಸೆಲ್ ನ ಮೇಲಿನ ಸೆಸ್ ಹೆಚ್ಚಳ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗುವ ಸಾಧ್ಯತೆ ಇದೆ.

- Advertisement -

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ.

Join Whatsapp
Exit mobile version