Home ಟಾಪ್ ಸುದ್ದಿಗಳು ರೈತ ಹೋರಾಟ ಸ್ಥಳದಲ್ಲಿ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ : ಬಿಜೆಪಿ ಸಚಿವರೊಂದಿಗೆ ಆರೋಪಿತ...

ರೈತ ಹೋರಾಟ ಸ್ಥಳದಲ್ಲಿ ದಲಿತ ಯುವಕನ ಹತ್ಯೆಗೆ ಬಿಗ್ ಟ್ವಿಸ್ಟ್ : ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಲ್ ಗುಂಪಿನ ನಾಯಕನ ಫೋಟೋ ವೈರಲ್

ಕೇಂದ್ರ ಸರಕಾರ ಜಾರಿ ಮಾಡಿರುವ ವಿವಾದಿತ ಮೂರು ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಒಂದು ವರ್ಷದಿಂದ ಶಾಂತಿಯುತವಾಗಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಅ.15 ರಂದು ಹೋರಾಟ ನಿರತ ಸಿಂಘು ಗಡಿಯಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದು ಪ್ರತಿಭಟನೆಯನ್ನು ಹತ್ತಿಕ್ಕಲೂ ಸರ್ಕಾರ ನಡೆಸಿರುವ ಸಂಚು ಎಂದು ರೈತ ಮುಖಂಡರು ಆರೋಪಿಸಿದ್ದರು.ರೈತ ಮುಖಂಡರ ಆರೋಪಕ್ಕೆ ನಿದರ್ಶನ ಎಂಬಂತೆ ಹತ್ಯೆ ಪ್ರಕರಣದಲ್ಲಿ ಬಂಧಿಸಲಾಗಿರುವ ಆರೋಪಿಗಳ ನಿಹಾಂಗ್ ಗುಂಪಿನ ಮುಖ್ಯಸ್ಥ ಬಾಬಾ ಅಮನ್ ಸಿಂಗ್ ಬಿಜೆಪಿ ಸಚಿವರನ್ನು ಭೇಟಿಯಾಗಿ ಸಭೆ ನಡೆಸಿರುವ ಚಿತ್ರಗಳು ದೊರಕಿದ್ದು, ಎಸ್‌ಕೆಎಂ ಟ್ವೀಟ್ ಮಾಡಿದೆ.


ನಿಹಾಂಗ್ ಪಂಥಗಳಲ್ಲಿ ಒಂದರ ಮುಖ್ಯಸ್ಥ, ಕೆನಡಾದ ಒಂಟಾರಿಯೊದಲ್ಲಿ ನೆಲೆಸಿರುವ ಸಿಖ್ ಗುಂಪಿಂನ ಬಾಬಾ ಅಮನ್ ಸಿಂಗ್, ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಸರ್ಕಾರದ ಪ್ರಯತ್ನಗಳಲ್ಲಿ ತೆರೆಮರೆಯ ಪಾತ್ರವನ್ನು ಹೊಂದಿರಬಹುದು ಎಂದು ಶಂಕಿಸಲಾಗಿದೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಈ ವರ್ಷದ ಜುಲೈ ಅಂತ್ಯದಲ್ಲಿ ನವದೆಹಲಿಯ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಭೇಟಿಯಾಗಿ ಸಭೆ ನಡೆಸಿದ್ದರು ಎಂದು ತಿಳಿದು ಬಂದಿದೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಹಲವು ಪ್ರಯತ್ನಗಳು ಮಡುತ್ತಿದ್ದು, ಇದು ಕೂಡ ಸರ್ಕಾರದ ಪ್ರಯತ್ನವೇ ಆಗಿದೆ ಎಂದು ರೈತ ನಾಯಕರು ಆರೋಪಿಸಿದ್ದಾರೆ. ಘಟನೆಯ ಸಂಪೂರ್ಣ ತನಿಖೆಗೆ ಆಗ್ರಹಿಸಿದ್ದಾರೆ.

Join Whatsapp
Exit mobile version