ಬಿಜೆಪಿ ಮುಖಂಡನ ಸಾವಿಗೆ ಬಿಗ್ ಟ್ವಿಸ್ಟ್: ಹನಿಟ್ರ್ಯಾಪ್ ಬೆದರಿಕೆಗೆ ಹೆದರಿ ಆತ್ಮಹತ್ಯೆ !

Prasthutha|

ಬೆಂಗಳೂರು: ಬಿಜೆಪಿ ಮುಖಂಡ ಬಿ. ಪಿ. ಅನಂತ ರಾಜು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾವಿಗೆ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ ಮೇಲ್ ಕಾರಣ ಅನ್ನುವ ವಿಚಾರ ಬೆಳಕಿಗೆ ಬಂದಿದೆ.

- Advertisement -

ಮೇ 12ರಂದು ರಾತ್ರಿ ಅನಂತ ರಾಜು ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಾಥಮಿಕ ತನಿಖೆಯಲ್ಲಿ ಥೈರಾಯ್ಡ್ ಸಮಸ್ಯೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಅವರ ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು ‘ಹನಿ ಟ್ರ್ಯಾಪ್’ ತಂಡದ ಬೆದರಿಕೆ ಕಾರಣದ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಅನಂತ ರಾಜು ಪತ್ನಿ ಸುಮಾ ಬ್ಯಾಡರ ಹಳ್ಳಿ ಪೊಲೀಸರಿಗೆ ದೂರು ನೀಡಿದ್ದು, ‘ಹಲವು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ ನನ್ನ ಪತಿಗೆ ರೇಖಾ ಪರಿಚಯ ಆಗಿದ್ದರು. ಬಳಿಕ ರೇಖಾ ಖಾಸಗಿ ವೀಡಿಯೋ ಮಾಡಿಟ್ಟುಕೊಂಡಿದ್ದರು.

- Advertisement -

ವೀಡಿಯೋಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ ರೇಖಾ, ಆಕೆಯ ಗಂಡ ವಿನೋದ್, ಸ್ಪಂದನಾ ಮೂವರು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜತೆಗೆ ರಾಜಕೀಯ ನಾಯಕರಿಗೆ ವೀಡಿಯೋ ಕಳಿಸಿ ರಾಜಕೀಯ ಜೀವನಕ್ಕೆ ಅಡ್ಡಿ ಮಾಡುವುದಾಗಿಯೂ ಬೆದರಿಸಿದ್ದರು. ಈ ವಿಚಾರವನ್ನು ಹಲವು ಬಾರಿ ಪತಿ ತನ್ನ ಬಳಿ ಹಂಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಕಳೆದ ಒಂದೂವರೆ ತಿಂಗಳಿನಿಂದ ರೇಖಾ ಹಾಗೂ ಇತರರು ಪುನಃ ಅವರನ್ನು ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಇದರಿಂದ ನೊಂದ ಅನಂತ ರಾಜು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸಮಾಧಾನ ಪಡಿಸಿ ಧೈರ್ಯ ತುಂಬಿದ್ದೆ. ಆದರೂ, ಅವರ ಕಿರುಕುಳ ತಾಳಲಾರದೆ ಮೇ 12ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಪತಿಯ ಸಾವಿಗೆ ರೇಖಾ, ವಿನೋದ್, ಸ್ಪಂದನಾ ಕಾರಣ ಎಂದು ಸುಮಾ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp