ಸ್ನೇಹಿತನಿಂದ ಅತ್ಯಾಚಾರ: ದೂರು ದಾಖಲಿಸಿದ ಬಿಗ್‌ ಬಾಸ್‌ ಸ್ಪರ್ಧಿ

Prasthutha|

ದೆಹಲಿ: ಸ್ನೇಹಿತನೊಬ್ಬ ಮನೆಗೆ ಕರೆದು ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಬಿಗ್‌ ಬಾಸ್‌ ಕಾರ್ಯಕ್ರಮದ ಮಾಜಿ ಸ್ಪರ್ಧಿ ದೆಹಲಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ಘಟನೆ 2023 ರಲ್ಲಿ ಡಿಯೋಲಿ ರಸ್ತೆಯ ಫ್ಲಾಟ್‌ ನಲ್ಲಿ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸ್ನೇಹಿತ ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಹಾಕಿ ಬಳಿಕ ಅತ್ಯಚಾರವೆಸಗಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಈ ಬಗ್ಗೆ ಪೊಲೀಸರು ತಿಗ್ರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಇದುವರೆಗೆ ಯಾವ ಬಂಧನವೂ ಆಗಿಲ್ಲ.

Join Whatsapp