Home ಕರಾವಳಿ ಮಂಗಳೂರು | ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ ಆರೋಪ: ದೂರು ದಾಖಲು

ಮಂಗಳೂರು | ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ ಆರೋಪ: ದೂರು ದಾಖಲು

ಮಂಗಳೂರು: ತುಳು ನಟ ಹಾಗೂ ’ಬಿಗ್ ಬಾಸ್’ ರಿಯಾಲಿಟಿ ಶೋ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಹಿನ್ನೆಲೆ ಅವರ ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.


ಬಿಗ್ ಬಾಸ್ ಶೋನಲ್ಲಿ ರೂಪೇಶ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕೆಲವರು ಬೆದರಿಕೆ ಹಾಕಿದ್ದಾರೆ. ರೂಪೇಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಕುಟುಂಬಸ್ಥರು ದೂರಿನಲ್ಲಿ ಆರೋಪಿಸಿದ್ದಾರೆ.


ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

Join Whatsapp
Exit mobile version