Home ಟಾಪ್ ಸುದ್ದಿಗಳು ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್

ಬಿಗ್ ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅರೆಸ್ಟ್

ಬೆಂಗಳೂರು: ‘ಬಿಗ್ ಬಾಸ್ ಕನ್ನಡ ಒಟಿಟಿ’ ಸೀಸನ್ ಮೂಲಕ ಫೇಮಸ್ ಆದ ಸೋನು ಶ್ರೀನಿವಾಸ್ ಗೌಡ ಅವರು ಅರೆಸ್ಟ್ ಆಗಿದ್ದಾರೆ.

ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧನ ಮಾಡಿದ್ದಾರೆ. ಮಗು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದ ಸೋನು ಗೌಡ ಇತ್ತೀಚೆಗೆ ಹೇಳಿಕೊಂಡಿದ್ದರು. 6ರಿಂದ 8 ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ಮಗು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ಜೆ.ಜೆ.ಆ್ಯಕ್ಟ್ ಅಡಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

Join Whatsapp
Exit mobile version