ಲೈಂಗಿಕ ಕಿರುಕುಳ ಆರೋಪ: ಮಲಯಾಳಂ ಬಿಗ್ ಬಾಸ್ ನಟ ಶಿಯಾಝ್ ಕರೀಂ ಅರೆಸ್ಟ್

Prasthutha|

ಕಾಸರಗೋಡು: ಮದುವೆಯಾಗುವುದಾಗಿ ಭರವಸೆ ನೀಡಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿಂತೆ ಮಲಯಾಳಂ ಬಿಗ್ ಬಾಸ್ ನಟ ಶಿಯಾಝ್ ಕರೀಂನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -


ವಿದೇಶ ದಿಂದ ಬಂದಿಳಿದ ಶಿಯಾಝ್ ನನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಾಸರಗೋಡು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಎರ್ನಾಕುಲಂ ನ ಜಿಮ್ ವೊಂದರಲ್ಲಿ ಕೆಲಸಕ್ಕಿದ್ದ ಯುವತಿಗೆ ಮದುವೆಯಾಗುವ ಭರವಸೆ ನೀಡಿರುವ ಶಿಯಾಝ್, 2021 ರಿಂದ 2023 ರ ತನಕ ಮೂರು ವರ್ಷ ಗಳಲ್ಲಿ ಎರ್ನಾಕುಲಂ, ಮುನ್ನಾರ್ ರೆಸಾರ್ಟ್ ಹಾಗೂ ಇನ್ನಿತರ ಕಡೆಗಳಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಸುಮಾರು 11 ಲಕ್ಷ ರೂ.ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಶಿಯಾಝ್ ವಿರುದ್ಧ ಲುಕ್ ಔಟ್ ನೋಟಿಸ್ ಬಿಡುಗಡೆಗೊಳಿಸಲಾಗಿತ್ತು.



Join Whatsapp