ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಅವರು ತಮ್ಮ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜ್ಯದ ಯುವಕರಿಗೆ ಈ ಹಿಂದೆ ನೀಡಿದ ಭರವಸೆಯ 10 ಲಕ್ಷ ಉದ್ಯೋಗದ ಜೊತೆಗೆ ರಾಜ್ಯದ ಯುವಕರಿಗೆ ಹೆಚ್ಚುವರಿಯಾಗಿ 10 ಲಕ್ಷ ಉದ್ಯೋಗಗಳನ್ನು ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.
ಪಾಟ್ನಾದ ಗಾಂಧಿ ಮೈದಾನದಲ್ಲಿ ಇಂದು ನಡೆದ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಜನತಾದಳ ಮತ್ತು ಜನತಾದಳ (ಯುನೈಟೆಡ್) ಮೈತ್ರಿ ಸರ್ಕಾರವು ಸರ್ಕಾರದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗಗಳನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುವರಿಯಾಗಿ 10 ಲಕ್ಷ ಉದ್ಯೋಗಾವಕಾಶಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.