ಬಿಹಾರ ಸಿಎಂ ಆಗಿ ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ | ಸಚಿವ ಸಂಪುಟ ಮಾತುಕತೆ ಆರಂಭ

Prasthutha|

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಸಾಧಿಸಿರುವ ಎನ್ ಡಿಎ ಮೈತ್ರಿಕೂಟ, ಏಳನೇ ಬಾರಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟಾಭಿಷೇಕ ಮಾಡಲು ದಿನ ನಿಗದಿ ಮಾಡಿದೆ. ಮುಂದಿನ ಸೋಮವಾರ (ನ.16) ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದಲ್ಲಿ ಬಿಜೆಪಿ, ಜೆಡಿಯುಗಿಂತ ಹೆಚ್ಚಿನ ಸ್ಥಾನಗಳನ್ನು ಗಳಿಸಿದ್ದರೂ, ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿಯಾಗಿಸಲು ಪಕ್ಷದ ಎಲ್ಲಾ ನಾಯಕರು ಸಮ್ಮತಿಸಿದ್ದಾರೆ ಎನ್ನಲಾಗಿದೆ. ಮುಂದಿನ ಸರಕಾರದ ಸಚಿವ ಸಂಪುಟ ಅಂತಿಮಗೊಳಿಸಲು ಎನ್ ಡಿಎ ಮೈತ್ರಿಕೂಟದ ಪಕ್ಷಗಳ ನಾಯಕರು ಪರಸ್ಪರ ಸಂಪರ್ಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

Join Whatsapp