ಬಿಹಾರ ಫಲಿತಾಂಶ | ಒವೈಸಿ ನೇತೃತ್ವದ AIMIM – 2, BSP – 1, CPM – 3, CPML – 13 ಮುನ್ನಡೆ

Prasthutha|

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ಮಹತ್ವದ ತಿರುವುಗಳನ್ನು ಪಡೆಯುತ್ತಿದ್ದು, ಎನ್ ಡಿಎ, ಮಹಾಮೈತ್ರಿಕೂಟವನ್ನು ಹೊರತುಪಡಿಸಿ, ಇತರ ಪಕ್ಷಗಳ ಪೈಕಿ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

- Advertisement -

ಉತ್ತರ ಪ್ರದೇಶದ ಮಾಜಿ ಸಿಎಂ ಮಾಯಾವತಿ ನೇತೃತ್ವದ ಬಿಎಸ್ ಪಿ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಸಿಪಿಎಂ ಮೂರು ಸ್ಥಾನಗಳಲ್ಲಿ ಮತ್ತು ಸಿಪಿಎಂ-ಎಲ್ 13 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇತ್ತೀಚೆಗೆ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ರ ಮಗ ಚಿರಾಗ್ ಪಾಸ್ವಾನ್ ನೇತೃತ್ವದ ಎಲ್ ಜೆಪಿ 4 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.   

Join Whatsapp