ವಲಸೆ ಕಾರ್ಮಿಕರ ಬಗ್ಗೆ ಸುಳ್ಳು ಮಾಹಿತಿ|  ಆರೋಪಿಯನ್ನು ಬಂಧಿಸಿದ ತಮಿಳುನಾಡು ಪೊಲೀಸರು

Prasthutha|

ತಿರುಪುರ್ : ತಮಿಳುನಾಡಿನಲ್ಲಿ ಬಿಹಾರ ಮೂಲದ ವಲಸೆ ಕಾರ್ಮಿಕರು ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಸುಳ್ಳು ಮಾಹಿತಿಯನ್ನು ಪೋಸ್ಟ್ ಮಾಡಿದ್ದ ಬಿಹಾರ ಬಿಹಾರದ 32 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಆರೋಪಿ ಪ್ರಶಾಂತ್‌ಕುಮಾರ್ ಬಿಹಾರ ಮೂಲದವನಾಗಿದ್ದು , ಸದ್ಯ ಜಾರ್ಖಂಡ್‌ನ ಲತೇಹರ್ ಜಿಲ್ಲೆಯ ಹೆನೆಗರೆ ಗ್ರಾಮದಲ್ಲಿ ನೆಲೆಸಿದ್ದನು. ಉತ್ತರ ಭಾರತದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವಂತೆ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಪ್ರಶಾಂತ್‌ಕುಮಾರ್ ನನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ಮೊಕ್ಕಾಂ ಹೂಡಿದ್ದ ತಂಡವು ಮಾರ್ಚ್ 11 ರಂದು ಪ್ರಶಾಂತ್‌ಕುಮಾರ್‌ನನ್ನು ಬಂಧಿಸಿ ಲತೇಹಾರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಟ್ರಾನ್ಸಿಟ್ ವಾರಂಟ್ ಮೇಲೆ ಆರೋಪಿಯನ್ನು ತಿರುಪುರಕ್ಕೆ ಕರೆತಂದು 3ನೇ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

ಈ ಸಂಬಂಧ ತಮಿಳುನಾಡು ಪೊಲೀಸರು 11 ಪ್ರಕರಣಗಳನ್ನು ದಾಖಲಿಸಿ ಮೂವರನ್ನು ಬಂಧಿಸಿದ್ದಾರೆ. ಎಲ್ಲಾ ವಲಸೆ ಕಾರ್ಮಿಕರು ರಾಜ್ಯದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ತಮ್ಮ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರಿಗೆ ಭರವಸೆ ನೀಡಿದ್ದರು. ಭಯವನ್ನು ಹರಡುವ, ವದಂತಿಗಳನ್ನು ಹರಡುವವರ ವಿರುದ್ಧ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.



Join Whatsapp