Home ಜಾಲತಾಣದಿಂದ ಬಿಹಾರ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಬಿಹಾರ: ಮುಸ್ಲಿಮ್ ಯುವಕನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಗಯಾ: ಕಳ್ಳತನದ ಆರೋಪದ ಮೇಲೆ ಮೂವರು ಮುಸ್ಲಿಂ ಯುವಕರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಥಳಿಸಿದ್ದು, ಗಂಭೀರ ಗಾಯಗೊಂಡಿದ್ದ ಓರ್ವ ಯುವಕ ಮೃತಪಟ್ಟ ಘಟನೆ ಬಿಹಾರದ ಗಯಾ ಜಿಲ್ಲೆಯ ಬರಾಚಟ್ಟಿ ಬ್ಲಾಕ್ನಲ್ಲಿ ನಡೆದಿದೆ.


ಉಳಿದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. 28 ವರ್ಷದ ಮುಹಮ್ಮದ್ ಬಾಬರ್ ಕೊಲೆಯಾದ ಯುವಕನಾಗಿದ್ದಾನೆ. “ಯುವಕರು ಅಮಾಯಕರಾಗಿದ್ದು, ಅವರ ವಿರುದ್ಧ ಕಳ್ಳತನದ ಸುಳ್ಳು ಆರೋಪ ಹೊರಿಸಲಾಗಿದೆ” ಎಂದು ಸಂತ್ರಸ್ತರ ಕುಟುಂಬಸ್ಥರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.


ದುಷ್ಕರ್ಮಿಗಳು ಯುವಕರನ್ನು ಹಿಡಿದು ಅಮಾನುಷವಾಗಿ ಥಳಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ದು ನಂತರ ಕಳ್ಳರು ಎಂದು ಹೇಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಮ್ಮದ್ ಬಾಬರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Join Whatsapp
Exit mobile version