ಬಿಹಾರ | ರೈಲಿನ ಮೇಲೆ ಕಲ್ಲು ತೂರಾಟ: ಪ್ರಯಾಣಿಕರಿಗೆ ಗಾಯ

Prasthutha|

ಪಾಟ್ನಾ: ಬಿಹಾರದ ಸಮಸ್ತಿಪುರ ಜಿಲ್ಲೆಯಲ್ಲಿ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ರೈಲಿನ ಮೇಲೆ ಗುರುವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

- Advertisement -


ಮುಜಾಫರ್ ಪುರ-ಸಮಸ್ತಿಪುರ ಮಾರ್ಗದಲ್ಲಿ ಜೈನಗರದಿಂದ ದೆಹಲಿಗೆ ರೈಲು ಪ್ರಯಾಣಿಸುತ್ತಿದ್ದಾಗ ದಾಳಿ ನಡೆದಿದೆ.


ಘಟನೆಯಲ್ಲಿ ಕೆಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮಸ್ತಿಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಸಮಸ್ತಿಪುರ ರೈಲ್ವೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದಾಳಿಕೋರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕಲ್ಲುಗಳನ್ನು ಏಕೆ ಎಸೆಯಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ.



Join Whatsapp