ಬಿಹಾರ | ಬಸ್ ಪಲ್ಟಿಯಾಗಿ ಇಬ್ಬರು ಸಾವು

Prasthutha|

ಕತಿಹಾರ್: ಬಸ್ ವೊಂದು ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್ ನಲ್ಲಿ ನಡೆದಿದೆ.

- Advertisement -


ಶಿವಂ ಡಿಲಕ್ಸ್ ಹೆಸರಿನ ಬಸ್ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಸುಮಾರು 48ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ರಾಂಚಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಕಬೀರ್ ಮಠದ ಬಳಿ ಪಲ್ಟಿಯಾಗಿತ್ತು. ಕತಿಹಾರ್ ಡಿಎಸ್ ಪಿ ಇಬ್ಬರ ಸಾವನ್ನು ಖಚಿತಪಡಿಸಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರೆದಿದೆ.

Join Whatsapp