ಮಂಗಳೂರು | ಬೈಕಿಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Prasthutha|

- Advertisement -

ಮಂಗಳೂರು: ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುರತ್ಕಲ್ ಗೋವಿಂದ ದಾಸ ಕಾಲೇಜು ಮುಂಭಾಗ ಗುರುವಾರ ರಾತ್ರಿ ನಡೆದಿದೆ.

ಕಟಪಾಡಿ ಮಟ್ಟು ನಿವಾಸಿ ಅಕ್ಷಯ್ (33) ಮೃತರು ಎಂದು ತಿಳಿದು ಬಂದಿದೆ. ಅಕ್ಷಯ್ ಅವರು ಮಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿಯ ತನ್ನ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭ ಗೋವಿಂದ ದಾಸ ಕಾಲೇಜು ಮುಂಭಾಗದಲ್ಲಿ ಲಾರಿಯ ಚಕ್ರದಡಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp