Home ಕರಾವಳಿ ಬಂಟ್ವಾಳ | ಬೈಕ್ ಡಿವೈಡರ್ ಗೆ ಡಿಕ್ಕಿ: ಗಾಯಾಳು ಯುವಕ ಮೃತ್ಯು

ಬಂಟ್ವಾಳ | ಬೈಕ್ ಡಿವೈಡರ್ ಗೆ ಡಿಕ್ಕಿ: ಗಾಯಾಳು ಯುವಕ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಕಳ್ಳಿಗೆ ನಿವಾಸಿ ಮುಝಮ್ಮಿಲ್  ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

ನ. 9 ರಂದು ರಾತ್ರಿ ವೇಳೆ ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಳಿಕ ಮುಝಮ್ಮಿಲ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ಅತಿಯಾದ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ.

Join Whatsapp
Exit mobile version