ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸಾವು

Prasthutha|

ಬೆಂಗಳೂರು: ಬೈಕೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದ ಬಳಿ ನಡೆದಿದೆ.

- Advertisement -

ಹೆಗ್ಗನಹಳ್ಳಿಯ ಅಮರೇಶ್ (49) ಮತ್ತು ಕಾಂತರಾಜ್ (47) ಮೃತಪಟ್ಟವರು.

ಅಮರೇಶ್ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರೆ, ಕಾಂತರಾಜ್ ಏರ್ ಪೋರ್ಟ್ ನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಇವರಿಬ್ಬರೂ ಮಂಡ್ಯದಿಂದ ಬೆಂಗಳೂರಿಗೆ ನಿನ್ನೆ ಸಂಜೆ ಬೈಕ್ ಬರುತ್ತಿದ್ದರು.

- Advertisement -

ಮಾರ್ಗ ಮಧ್ಯದ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp