ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು; ಆರೋಪಿ ಸೆರೆ

ಚಿಕ್ಕಮಗಳೂರು: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಬೈಕ್ ಅನ್ನು ವಶಕ್ಕೆ ಪಡೆದಿರುವ ಘಟನೆ ಕೊಪ್ಪದಲ್ಲಿ ನಡೆದಿದೆ.


ಕೊಪ್ಪ ತಾಲೂಕಿನ ಮುನಿಯೂರು ಬಂಡಿಗಡಿ ಗ್ರಾಮದಲ್ಲಿ ಮನೆಯ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ್ದ ಆರೋಪಿಯನ್ನು ಹರಿಹರಪುರ ಪೊಲೀಸರು ಬಂಧಿಸಿದ್ದಾರೆ.

- Advertisement -


ಇತ್ತೀಚಿಗೆ ಮಲೆನಾಡು ಭಾಗದಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೈಕ್ ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದು ಈ ಬಗ್ಗೆ ಬೈಕ್ ಚಾಲಕರು ಎಚ್ಚರಿಕೆ ವಹಿಸುವುದು ಸೂಕ್ತ.