ಬಂಟ್ವಾಳ: ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಬ್ಯಾಂಕ್ ಉದ್ಯೋಗಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳದ ಪಾಣೆಮಂಗಳೂರು ಸಮೀಪ ನಡೆದಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.
ಮೃತಪಟ್ಟ ವ್ಯಕ್ತಿಯನ್ನು ಮಂಗಳೂರಿನ ಬ್ಯಾಂಕೊಂದರಲ್ಲಿ ಉದ್ಯೋಗಿಯಾದ ಮಂಚಿ ಗ್ರಾಮದ ಕಂಚಿಲ ನಿವಾಸಿ 55 ವರ್ಷದ ಗಣೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಅವರು, ಬೆಳಗ್ಗೆ ಮನೆಯಿಂದ ಕಚೇರಿಗೆ ಹೋಗುವ ವೇಳೆ ಘಟನೆ ನಡೆದಿದೆ.
ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಗಣೇಶ್ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.