Home ಕರಾವಳಿ ಮಂಗಳೂರು | ಬೈಕ್ ಸವಾರ ಮೃತಪಟ್ಟ ಪ್ರಕರಣ: ಬಸ್ ತಡೆದು ಸ್ಥಳೀಯರಿಂದ ಪ್ರತಿಭಟನೆ

ಮಂಗಳೂರು | ಬೈಕ್ ಸವಾರ ಮೃತಪಟ್ಟ ಪ್ರಕರಣ: ಬಸ್ ತಡೆದು ಸ್ಥಳೀಯರಿಂದ ಪ್ರತಿಭಟನೆ

ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂ.22ರಂದು ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಇಂದು ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಅಪಘಾತದಲ್ಲಿ ಮೃತಪಟ್ಟಿದ್ದರು.


ಇನ್ನು ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್ ಸಂಪೂರ್ಣ ಬ್ಲಾಕ್ ಆಗಿದ್ದು, ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ.

Join Whatsapp
Exit mobile version