ಬಿಲ್ಕಿಸ್ ಬಾನು ಪ್ರಕರಣ: ಎಲ್ಲಾ 11 ಮಂದಿ ಅಪರಾಧಿಗಳು ಜ.21ರೊಳಗೆ ಶರಣಾಗಿ; ಸುಪ್ರೀಂಕೋರ್ಟ್ ಆದೇಶ

Prasthutha|

ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳು ಶರಣಾಗತಿಗೆ ಸಮಯಾವಕಾಶ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

- Advertisement -


ಜ.21ರೊಳಗೆ ಎಲ್ಲಾ 11 ಮಂದಿ ಅಪರಾಧಿಗಳು ಶರಣಾಗಬೇಕು ಎಂದು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ನೇತೃತ್ವದ ಪೀಠ ಇಂದು ಆದೇಶಿಸಿದೆ.


2002ರ ಗೋಧ್ರಾ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರವೆಸಗಿ ಆಕೆಯ ಕುಟುಂಬವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ 11 ದೋಷಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿತ್ತು. ಅವರ ಬಿಡುಗಡೆಯ ವಿರುದ್ಧದ ಮೇಲ್ಮನವಿಗಳನ್ನು ಈ ತಿಂಗಳ ಆರಂಭದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ್ದು ಅಪರಾಧಿಗಳ ಬಿಡುಗಡೆಯನ್ನು ರದ್ದುಗೊಳಿಸಿತ್ತು.



Join Whatsapp