ನವದೆಹಲಿ: ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆಗೊಳಿಸಿರುವ ಆದೇಶ ಒಳಗೊಂಡಂತೆ ಎಲ್ಲಾ ವಿಧದ ದಾಖಲೆಗಳನ್ನು ಸಲ್ಲಿಸಲು ಸುಪ್ರೀಮ್ ಕೋರ್ಟ್, ಗುಜರಾತ್ ಸರ್ಕಾರಕ್ಕೆ ಖಡಕ್ ಆಗಿ ಆದೇಶ ನೀಡಿದೆ.
ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಲ್ಲಿಸಲು ಗುಜರಾತ್ ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶವನ್ನು ನೀಡಿದೆ.
2002 ರಲ್ಲಿ ನಡೆದ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನು ಅವರ ಕುಟುಂಬದ ಏಳು ಮಂದಿಯನ್ನು ಸಾಮೂಹಿಕ ಅತ್ಯಾಚಾರಕ್ಕೊಳಪಡಿಸಿದ ಬಳಿಕ ಹತ್ಯೆ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ಅಪರಾಧಿಗಳನ್ನು ಜೀವಾವಧಿ ಶಿಕ್ಷೆಗೊಳಪಡಿಸಲಾಗಿತ್ತು. ಆ ಬಳಿಕ ಅವರನ್ನು ಗುಜರಾತ್ ಸರ್ಕಾರ ಅವಧಿಪೂರ್ವ ಬಿಡುಗಡೆಗೆ ಆದೇಶ ನೀಡಿತ್ತು.
ಇದಕ್ಕೆ ಸಂಬಂಧಿಸಿದ ವಿಚಾರಣೆಯು ಮುಂದಿನ ಮೂರು ವಾರಗಳ ಬಳಿಕ ನಡೆಯಲಿದೆ.